ಧಾರವಾಡ: ಯಾವ ನಟರು ಪದ್ಮಶ್ರೀ ಪ್ರಶಸ್ತಿ ಪಡೆದು ತಂಬಾಕು ಉತ್ಪನ್ನಗಳ ಬಗ್ಗೆ ಜಾಹೀರಾತು ಮಾಡುತ್ತಿದ್ದಾರೋ ಅಂತವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕು ಎಂದು ಗೋವಾ ಸರ್ಕಾರದ ಕೆಲವೊಂದಿಷ್ಟು ಶಾಸಕರು ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದ್ದು ಸ್ವಾಗತಾರ್ಹ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಮುಖಂಡ ಶಿವಾಜಿ ಡೇಂಬ್ರೆ ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ನಟರ ನಟನೆಗಳು ಅವರ ಅಭಿಮಾನಿಗಳ ಮೇಲೆ ಪರಿಣಾಮ ಬೀರುತ್ತವೆ. ಹೀಗಿರುವಾಗ ಪದ್ಮಶ್ರೀ ಪ್ರಶಸ್ತಿ ಪಡೆದೂ ತಂಬಾಕು ಉತ್ಪನ್ನಗಳ ಬಗ್ಗೆ ಜಾಹೀರಾತು ಮಾಡುವುದು ಸರಿಯಲ್ಲ. ಅಂತಹ ನಟರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ ಎಂಬ ಗೋವಾ ಶಾಸಕರ ಒತ್ತಾಯ ಸರಿಯಾಗಿಯೇ ಇದೆ. ತಂಬಾಕನ್ನು ದೇಶದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/04/2022 02:50 pm