ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಪಘಾತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಧಾರವಾಡ ಸಮೀಪದ ಬಾಡ ಗ್ರಾಮದ ಬಳಿ ನಡೆದಿದ್ದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಇನ್ನೂ 8 ಜನ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ಯೋಗಕ್ಷೇಮ ವಿಚಾರಿಸಿದರು.

ಮದುವೆಗೆ ಹೊರಟಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಈ ಭೀಕರ ಅಪಘಾತ ಈಡಿ ಧಾರವಾಡ ಜನಾ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಗಾಯಗೊಂಡಿರುವವರನ್ನು ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಧೈರ್ಯ ತುಂಬಿ, ಅಲ್ಲದೇ ಸೂಕ್ತ ಚಿಕಿತ್ಸೆ ನೀಡುವಂತೆ ಕಿಮ್ಸ್ ನಿರ್ದೇಶಕರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ‌ ನೀಡಿದ್ದಾರೆ.

Edited By : Vijay Kumar
Kshetra Samachara

Kshetra Samachara

22/05/2022 08:45 pm

Cinque Terre

18.41 K

Cinque Terre

2

ಸಂಬಂಧಿತ ಸುದ್ದಿ