ಹುಬ್ಬಳ್ಳಿ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ವೈದ್ಯರು ಮತ್ತು ಆಸ್ಪತ್ರೆಗಳ ಅರೆವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ.
ಕೋವಿಡ್ 19 ರ ಈ ಕಾರ್ಯಭಾರಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಸಂಕಲ್ಪ ಮಾಡಿದ ಹುಬ್ಬಳ್ಳಿಯ ಕೆಎಲ್ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಹಾಗೂ ಕೆಎಲ್ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳು ಹುಬ್ಬಳ್ಳಿಯ ಸ್ವರ್ಣಾ ಗ್ರೂಪಿನ ಡಾ. ವಿ.ಎಸ್.ವಿ. ಪ್ರಸಾದ ಅವರ ಪ್ರಾಯೋಜಕತ್ವದಲ್ಲಿ ಅಭಿವೃದ್ಧಿ ಪಡಿಸಿರುವ ಸ್ವಯಂ ಚಾಲಿತ ರೊಬೋಟಿಕ್ ವಾಹನ " ಪ್ರಧಾಯ" ವನ್ನು ಇಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಕಿಮ್ಸ್ ಸಂಸ್ಥೆಗೆ ಹಸ್ತಾಂತರಿಸಿದರು.
Kshetra Samachara
07/10/2020 08:20 pm