ಧಾರವಾಡ: ಅನಾರೋಗ್ಯ ಕಾರಣದಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿರುವ ಧಾರವಾಡದ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಮತ್ತಷ್ಟು ಚಿಂತಾಜನಕವಾಗಿದೆ.
ಸದ್ಯ ಕಣವಿ ಅವರನ್ನು ವೆಂಟಿಲೇಟರ್ ಮೇಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ಮೂತ್ರ ವಿಸರ್ಜನೆಗೂ ತೊಂದರೆ ಆಗುತ್ತಿದ್ದು, ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಪ್ರಕಟಣೆ ತಿಳಿಸಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/01/2022 06:16 pm