ಧಾರವಾಡ: ನಾಡಿನ ಹಿರಿಯ ಕವಿ ನಾಡೋಜ ಡಾ.ಚೆನ್ನವೀರ ಕಣವಿ ಅವರು ಚಿಕಿತ್ಸೆ ಪಡೆಯುತ್ತಿರುವ ಎಸ್‍ಡಿಎಂ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸನಗೌಡ ಕರಿಗೌಡರ ಅವರು ಭೇಟಿ ನೀಡಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದರು.
ಡಾ. ಚೆನ್ನವೀರ ಕಣವಿ ಅವರು ಆಸ್ಪತ್ರೆಗೆ ದಾಖಲಾದ ದಿನದಿಂದ ಇಲ್ಲಿಯವರೆಗೆ ಅವರಿಗೆ ನೀಡಿರುವ ಚಿಕಿತ್ಸೆ ಹಾಗೂ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು. ತಜ್ಞ ವೈದ್ಯರ ತಂಡ ನಿರಂತರ ನಿಗಾವಹಿಸಿದ್ದಾರೆ.
ಡಿಎಚ್‌ಓ ಡಾ.ಬಸನಗೌಡ ಕರಿಗೌಡರ ಅವರು ವೈದ್ಯರೊಂದಿಗೆ ಮಾತನಾಡಿ, ಕವಿ ಕಣವಿ ಅವರ ಆರೋಗ್ಯ ಚಿಕಿತ್ಸೆಗೆ ಎಲ್ಲ ನೆರವು ನೀಡುವುದಾಗಿ ಸರ್ಕಾರ ತಿಳಿಸಿದ್ದು, ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ನೀಡಿ ಬೇಗ ಗುಣಮುಖರಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ನಿಮ್ಮ ನೆರವಿಗೆ ಸದಾ ಸಿದ್ಧವಿದೆ ಎಂದು ವೈದ್ಯರ ತಂಡಕ್ಕೆ ತಿಳಿಸಿದರು.
Kshetra Samachara
20/01/2022 07:34 pm