ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ಹುಡುಗಿ ಹೃದಯ ಬೆಳಗಾವಿಯ ಹುಡುಗನಿಗೆ..!

ಧಾರವಾಡ: ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಯುವತಿಯೊಬ್ಬಳ ಅಂಗಾಂಗವನ್ನು ಆಕೆಯ ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ತೋರಿದ್ದಾರೆ. ಅಷ್ಟೇ ಅಲ್ಲ, ಆ ಯುವತಿ ಕೂಡ ಸಾರ್ಥಕತೆ ಮೆರೆದಿದ್ದಾಳೆ.

ಹೌದು, ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬಳ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅಗತ್ಯ ಇರುವವರಿಗೆ ಆಕೆಯ ಅಂಗಾಂಗ ದಾನ ಮಾಡಲು ಪೋಷಕರು ಮುಂದಾದರು. ಹೃದಯ, ಲೀವರ್ ಹಾಗೂ ಕಿಡ್ನಿಯನ್ನು ದಾನ ಮಾಡಿದ್ದಾರೆ.

ಯುವತಿಯ ಹೃದಯವನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ ಮೂಲಕ ಕೊಂಡೊಯ್ಯಲಾಗಿದೆ. ಇದಕ್ಕೆ ಪೊಲೀಸ್ ಬೆಂಗಾವಲು ವಾಹನವನ್ನೂ ನೀಡಲಾಗಿತ್ತು. ಇನ್ನು ಲೀವರ್‌ನ್ನು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ತೆಗೆದುಕೊಂಡು ಹೋದರೆ, ಒಂದು ಕಿಡ್ನಿಯನ್ನು ಎಸ್‌ಡಿಎಂ ಆಸ್ಪತ್ರೆಯಲ್ಲೇ ಒಬ್ಬರಿಗೆ ಕಸಿ ಮಾಡಲಾಗಿದೆ. ಇನ್ನೊಂದು ಕಿಡ್ನಿಯನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಒಟ್ಟಾರೆಯಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಿಂದ ಜೀವಂತ ಹೃದಯವನ್ನು ಬಿಆರ್‌ಟಿಎಸ್ ರಸ್ತೆಯಲ್ಲಿ ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಗಿದ್ದು, ಧಾರವಾಡದ ಸಾರ್ವಜನಿಕರು ಅಂಬ್ಯುಲೆನ್ಸ್‌ಗೆ ದಾರಿ ಬಿಟ್ಟು ಸಹಕಾರ ಕೊಟ್ಟಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/07/2022 08:33 pm

Cinque Terre

117.72 K

Cinque Terre

7

ಸಂಬಂಧಿತ ಸುದ್ದಿ