ಕಲಘಟಗಿ:ತಾಲೂಕಿನ ತಾವರಗೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಜನರಲ್ಲಿ ಕೊವೀಡ್-೧೯ ಜಾಗೃತಿ ಮೂಡಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಅವರ ನೇತೃತ್ವದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಹಿರಿಯ ನಾಗರೀಕರ ಆರೋಗ್ಯ ತಪಾಸಣೆ ನಡೆಸಿ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಕಿಸಾನ್ ಘಟಕದ ಪ್ರ ಕಾ ಶರಣಪ್ಪ ಮಡಿವಾಳರ,ಪರಶುರಾಮ ಉಪಸ್ಥಿತರಿದ್ದರು.
Kshetra Samachara
19/09/2020 05:26 pm