ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಹಾರಾಷ್ಟ್ರದಿಂದ ಆರ್.ಟಿ.ಪಿ.ಸಿ.ಆರ್ ವರದಿ ಇಲ್ಲದೇ ಬಂದ ಇಬ್ಬರು ಕ್ವಾರಂಟೈನ್

ಹುಬ್ಬಳ್ಳಿ: ಆಗಸ್ಟ್ 7ರಂದು ಮಹಾರಾಷ್ಟ್ರದಿಂದ ಬಸ್ ನಲ್ಲಿ ಆಗಮಿಸಿದ 10 ಜನ ಪ್ರಯಾಣಿಕರಲ್ಲಿ ಆರ್.ಟಿ.ಪಿ.ಸಿ.ಆರ್ ವರದಿ ಇಲ್ಲದ ಕಾರಣ ಅವರನ್ನು ತಪಾಸಣೆ ಮಾಡಲಾಯಿತು. ಅದರಲ್ಲಿ 8 ಜನರನ್ನು ವೈದ್ಯಕೀಯ ಚಿಕಿತ್ಸೆ ಕಾರಣದಿಂದ ಬಿಡಲಾಯಿಗಿದ್ದು ಉಳಿದ ಇಬ್ಬರನ್ನು ನಗರದ ಅಂಜುಮನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಸಹ ಆ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ 72 ಗಂಟೆಗಳ ಒಳಗೆ ಮಾಡಿಸಿದ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯ ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಆರ್.ಟಿ.ಪಿ.ಸಿ.ಆರ್ ವರದಿ ಹೊಂದದೇ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

08/08/2021 11:24 am

Cinque Terre

28.28 K

Cinque Terre

4

ಸಂಬಂಧಿತ ಸುದ್ದಿ