ವರದಿ: ಬಿ.ನಂದೀಶ
ಅಣ್ಣಿಗೇರಿ; ಶನಿವಾರ ಮತ್ತು ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣಿಗೇರಿ ತಾಲೂಕಿನ ಸುತ್ತ ಮುತ್ತಲಿನ ಹಾಗೂ ಪಟ್ಟಣದ ಸಾರ್ವಜನಿಕರು ತಮಗೆ ಅಗತ್ಯವಿರುವ ದಿನಸಿ ಹಾಗೂ ಇತರ ಸಾಮಗ್ರಿಗಳನ್ನು ಖರೀದಿಸಲು ಅಣ್ಣಿಗೇರಿ ಮಾರುಕಟ್ಟೆಯತ್ತ ಮುಖ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಹೀಗಾಗಿ ಸರಕಾರ ಎರಡು ದಿನಗಳವರೆಗೆ ವಾರಂತ್ಯದ ಕರ್ಫ್ಯೂ ಜಾರಿ ಮಾಡಿದೆ. ಇನ್ನು ತಾಲೂಕು ದಂಡಾಧಿಕಾರಿ ಮಂಜುನಾಥ್ ಅಮಾಸೆ ಮಾತನಾಡಿ ತುರ್ತು ಕಾರ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದೆ. ಅನಗತ್ಯವಾಗಿ ಹೊರಗೆ ಓಡಾಡಲು ಅವಕಾಶವಿಲ್ಲ ಎಂದಿದ್ದಾರೆ. ಇನ್ನು ರಾಜ್ಯ ಸರಕಾರ ಜಾರಿಗೊಳಿಸಿರುವ ನಿಯಮಗಳನ್ನು ತಾಲೂಕು ಸೇರಿದಂತೆ ಪಟ್ಟಣದ ಸಾರ್ವಜನಿಕರು ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಸೂಚಿಸಿದ್ದಾರೆ.
Kshetra Samachara
07/01/2022 07:53 pm