ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಶಾಲಾ ಮಕ್ಕಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಹತ್ತು ಜನ ಪೊಲೀಸರಿಗೆ ಸೋಂಕು ತಾಕಿದೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಸದ್ಯ ಹತ್ತು ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಸೋಂಕು ತಗುಲಿರುವ ಸಿಬ್ಬಂದಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅವರು ಮನೆಗೆ ಹೋಗದೇ ಐಸೋಲೇಷನ್‌ಲ್ಲಿ ಉಳಿದುಕೊಂಡು ಚಿಕಿತ್ಸೆ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕರ್ಫ್ಯೂ ಪಾಲನೆ ಮಾಡಲಾಗುತ್ತಿದೆ. ಜನ ಕೂಡ ಪೊಲೀಸರಿಗೆ ಅಗತ್ಯ ಸಹಕಾರ ನೀಡುತ್ತಿದ್ದಾರೆ. ಈ ವರ್ಷ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಶೀಘ್ರವಾಗಿ ಸೋಂಕು ತಾಕುತ್ತಿದೆ. ಹೀಗಾಗಿ ಎಲ್ಲರೂ ಸುರಕ್ಷತೆಯಿಂದ ಇರಬೇಕು ಎಂದರು.
ಧಾರವಾಡ ಜಿಲ್ಲೆ ಬೇರೆ ರಾಜ್ಯಗಳ ಗಡಿ ಭಾಗಕ್ಕೆ ಹೊಂದಿಕೊಂಡಿಲ್ಲ. ಗಡಿ ಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಪೊಲೀಸರಿಂದ ಚೆಕ್ ಪೋಸ್ಟ್ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಪೊಲೀಸ್ ಚೆಕ್ ಪಾಯಿಂಟ್‌ಗಳನ್ನು ಮಾತ್ರ ಮಾಡಲಾಗಿದೆ ಎಂದು ಎಸ್ಪಿ ಕೃಷ್ಣಕಾಂತ ತಿಳಿಸಿದರು.
Kshetra Samachara
12/01/2022 02:27 pm