ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೆಕ್ಕಾಬಿಟ್ಟಿ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸುತ್ತಿರುವ ಹುಬ್ಬಳ್ಳಿ ಪೊಲೀಸರು

ಹುಬ್ಬಳ್ಳಿ: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂನಿಂದಾಗಿ ಹುಬ್ಬಳ್ಳಿಯಲ್ಲಿ ಪೊಲೀಸರು ಬೆಳ್ಳಂಬೆಳಗ್ಗೆ ಫಿಲ್ಡ್ ಗೆ ಇಳಿದಿದ್ದಾರೆ. ನಗರದ ಚೆನ್ನಮ್ಮ ವೃತ್ತದಲ್ಲಿ ಪೊಲೀಸರಿಂದ ವಾಹನ ತಪಾಸಣೆ ನಡೆಯುತ್ತಿದ್ದು, ಕೊರೊನಾ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಮತ್ತು ಬೆಕ್ಕಾಬಿಟ್ಟಿ ರಸ್ತೆಗಿಳಿದವರಿಗೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.

ಇನ್ನು ನಗರದ ಪ್ರಮುಖ ಮಾರ್ಕೆಟ್ ಗಳಾದ ದುರ್ಗದ ಬೈಲ್, ಜನತಾ ಬಜಾರ್ ಸೇರಿದಂತೆ ವಿವಿಧ ಮಾರ್ಕೆಟ್ ಗಳಲ್ಲಿ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ.

ಬೆಳಿಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು,ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಜನರ ಸಂಚಾರಕ್ಕೆ ಬ್ರೇಕ್ ಬಿದಿದೆ.

ಬಸ್ ಸಂಚಾರ ಎಂದಿನಂತೆ ಶುರುವಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿವೆ. ನಗರ ಸಾರಿಗೆ ಹಾಗೂ ಅಂತರ ಜಿಲ್ಲಾ ಸಾರಿಗೆ ಬಸ್ ಸಂಚರಿಸುತ್ತಿದ್ದು, ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಓಡಾಟ ನಡೆಸಿವೆ.

Edited By : Manjunath H D
Kshetra Samachara

Kshetra Samachara

15/01/2022 09:16 am

Cinque Terre

45.13 K

Cinque Terre

7

ಸಂಬಂಧಿತ ಸುದ್ದಿ