ಧಾರವಾಡ: ಮಕರ ಸಂಕ್ರಾಂತಿಯನ್ನು ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಆದರೆ, ಪ್ರಸಕ್ತ ವರ್ಷ ಕೊರೊನಾ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿರುವುದರಿಂದ ಸಂಕ್ರಾಂತಿ ಮೇಲೆ ಕರಿ ನೆರಳು ಬಿದ್ದಂತಾಗಿದೆ.
ಎರಡನೇ ವಾರವೂ ವೀಕೆಂಡ್ ಕರ್ಫ್ಯೂಗೆ ಧಾರವಾಡದಲ್ಲಿ ಉತ್ತಮ ಜನ ಬೆಂಬಲ ವ್ಯಕ್ತವಾಗಿದೆ. ನಿನ್ನೆ ರಾತ್ರಿಯಿಂದಲೇ ನಗರದ ಎಲ್ಲ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ಬೀದಿ ಬದಿ ತರಕಾರಿ, ಹಣ್ಣು ಮಾರಾಟ ಮಾಡುವವರಿಗೆ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ. ಅದರ ಜೊತೆಗೆ ಹಾಲು, ಬೇಕರಿ, ಮಾಂಸ ಮಾರಾಟದ ಅಂಗಡಿಗಳಿಗೂ ಪರವಾನಿಗಿ ನೀಡಲಾಗಿದೆ. ಧಾರವಾಡ ನಗರಲದಲ್ಲಿ ವಾಹನ ಸಂಚಾರ ವಿರಳವಾಗಿದ್ದು, ಕಡಿಮೆ ಸಂಖ್ಯೆಯಲ್ಲಿ ಸಾರಿಗೆ ಸಂಸ್ಥೆ ಬಸ್ಸುಗಳನ್ನು ರಸ್ತೆಗಿಳಿಸಲಾಗಿದೆ.
ಒಟ್ಟಾರೆಯಾಗಿ ಈ ವಾರವೂ ವೀಕೆಂಡ್ ಕರ್ಫ್ಯೂಗೆ ಧಾರವಾಡದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಪೊಲೀಸರು ಅಲ್ಲಲ್ಲಿ ನಿಂತು ಬೇಕಾಬಿಟ್ಟಿಯಾಗಿ ಸಂಚರಿಸುವ ವಾಹನಗಳಿಗೆ ದಂಡ ಹಾಕುವ ಕೆಲಸ ಮಾಡುತ್ತಿದ್ದಾರೆ.
Kshetra Samachara
15/01/2022 12:51 pm