ಹುಬ್ಬಳ್ಳಿ: ಹು- ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 250 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಳೆದ ವಾರ ಕೊರೊನಾ ಪಾಸಿಟಿವ್ ಆಗಿದ್ದು, ಆತಂಕಕ್ಕೆ ಕಾರಣವಾಗಿತ್ತು. ಇದೀಗ 40 ಪೊಲೀಸರು ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 250 ಸಿಬ್ಬಂದಿಯಲ್ಲಿ ಕೆಲವರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದರು. ಉಳಿದ ಎಲ್ಲರ ಆರೋಗ್ಯ ಸ್ಥಿರವಾಗಿತ್ತು. ಬುಧವಾರ 20 ಹಾಗೂ ಗುರುವಾರ 20 ಸಿಬ್ಬಂದಿ ಕರ್ತವ್ಯಕ್ಕೆ ವಾಪಸಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದ್ದಾರೆ.
ಒಟ್ಟಿನಲ್ಲಿ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಕೋವಿಡ್ ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಖಾಕಿ ಪಡೆ ಮೂರನೇ ಅಲೆಯಲ್ಲಿಯೂ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
Kshetra Samachara
21/01/2022 10:13 am