ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ವೆಂಟಿಲೇಟರ್, ಹೈ ಫ್ಲೋ ಆಕ್ಸಿಜನ್ ಬೇಕಾ? ಹಾಗಾದ್ರೆ ಇವರನ್ನ ಸಂಪರ್ಕಿಸಿ

ಧಾರವಾಡ : ಖಾಸಗಿ ಆಸ್ಪತ್ರೆಗಳು ಸರ್ಕಾರದಿಂದ ವೆಂಟಿಲೇಶನ್ ಹಾಗೂ ಹೈ ಫ್ಲೋ ಆಕ್ಸಿಜನ್ ಉಪಕರಣಗಳ ನೆರವು ಬಯಸಿದರೆ ತ್ವರಿತವಾಗಿ ಪೂರೈಸಲಾಗುವುದು.ಈ ಕಾರ್ಯಕ್ಕಾಗಿ ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಅವರು ಇಂದು ಸಂಜೆ ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು,

ಸೋಂಕು ದೃಢಪಟ್ಟ ವ್ಯಕ್ತಿಗಳಿಗೆ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲು ನೋಡಲ್ ಅಧಿಕಾರಿಗಳಾದ ಡಾ.ಸುಜಾತಾ ಹಸವಿಮಠ ಹಾಗೂ ಡಾ.ಶಶಿ ಪಾಟೀಲ ಅವರನ್ನು ಖಾಸಗಿ ಆಸ್ಪತ್ರೆಗಳು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.ಈ ವೇಳೆ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಮಾತನಾಡಿ, ಹುಬ್ಬಳ್ಳಿ ಧಾರವಾಡ ಅವಳಿ ನಗರ ಹಾಗೂ ಜಿಲ್ಲೆಯಾದ್ಯಂತ ತಪಾಸಣೆ ಪ್ರಮಾಣ ಹೆಚ್ಚಿಸಲು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ್ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಒದಗಿಸಿದರೆ, ಸರ್ಕಾರದಿಂದಲೇ ಡಾಟಾ ಎಂಟ್ರಿ ಆಪರೇಟರುಗಳು ,ವಿಟಿಎಂ ಹಾಗೂ ಇತರೆ ಪರೀಕ್ಷಾ ಕಿಟ್ ಗಳನ್ನು ಉಚಿತವಾಗಿ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.

ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ,ಸೇರಿದಂತೆ ಇತರರು ಇದ್ದರು.

Edited By :
Kshetra Samachara

Kshetra Samachara

25/09/2020 09:35 pm

Cinque Terre

16.46 K

Cinque Terre

0

ಸಂಬಂಧಿತ ಸುದ್ದಿ