ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲಾಸ್ಪತ್ರೆ, ಡಿಮಾನ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ

ಧಾರವಾಡ: ಕಳೆದ ಎರಡು ದಿನಗಳಿಂದ ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರೂ ಆದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಇಂದು ಸಂಜೆ ಧಾರವಾಡ ಜಿಲ್ಲಾಸ್ಪತ್ರೆ ಹಾಗೂ ಧಾರವಾಡದ ಡಿಮಾನ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಆಸ್ಪತ್ರೆ ಸೌಲಭ್ಯಗಳನ್ನು ಪರಿಶೀಲಿಸಿದರು.

ನ್ಯಾಯಮೂರ್ತಿಗಳು ಆಸ್ಪತ್ರೆಗಳ ಸಾಮಾನ್ಯ ವಾರ್ಡ್, ಶಸ್ತ್ರ ಚಿಕಿತ್ಸೆ, ಮಹಿಳೆ, ಮಕ್ಕಳ ಹಾಗೂ ವಿಶೇಷ ಚೇತನರ ವಾರ್ಡ್‍ಗಳಿಗೆ ಭೇಟಿ ನೀಡಿ, ರೋಗಿ ಹಾಗೂ ರೋಗಿಗಳ ಪಾಲಕರಿಂದ ಆಸ್ಪತ್ರೆ ಸೌಲಭ್ಯ, ವೈದ್ಯರ ಸ್ಪಂದನೆ, ಪರಿಣಾಮಕಾರಿ ಚಿಕಿತ್ಸೆಯ ಕುರಿತು ಮಾಹಿತಿ ಪಡೆದು, ಆಸ್ಪತ್ರೆಗಳ ಮುಖ್ಯಸ್ಥರಿಂದ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆಗಿರುವ ನ್ಯಾಯಾಧೀಶ ಎಚ್.ಶಶಿಧರ ಶೆಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ.ಸಿ.ಎಂ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಡಿಮಾನ್ಸ್ ಆಡಳಿತಾಧಿಕಾರಿ ಷಣ್ಮುಖಪ್ಪ ಸೇರಿದಂತೆ ವಿವಿಧ ವೈದ್ಯರು, ಆಸ್ಪತ್ರೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

20/05/2022 10:24 pm

Cinque Terre

27.31 K

Cinque Terre

1

ಸಂಬಂಧಿತ ಸುದ್ದಿ