ಧಾರವಾಡ: ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿದ್ದು, ಆ ರಾಜ್ಯದಿಂದ ಬರುವವರನ್ನು ಚೆಕ್‌ಪೋಸ್ಟ್ ಮೂಲಕ ತಪಾಸಣೆ ನಡೆಸಿಯೇ ನಮ್ಮ ರಾಜ್ಯದ ಒಳಗಡೆ ಬಿಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆಗೆ ಕೇರಳ ಹಾಗೂ ಮಹಾರಾಷ್ಟ್ರದ ಗಡಿ ಹತ್ತಿಕೊಂಡಿಲ್ಲ. ಹೀಗಾಗಿ ಇಲ್ಲಿ ಚೆಕ್‌ಪೋಸ್ಟ್ ಮಾಡಿಲ್ಲ. ಆ ರಾಜ್ಯಕ್ಕೆ ಹೊಂದಿಕೊಂಡ ಜಿಲ್ಲೆಗಳ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್ ಮಾಡಿ ಜನರನ್ನು ತಪಾಸಣೆ ಮಾಡಲಾಗುತ್ತಿದೆ. ಯಾರ ಬಳಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದೆಯೋ ಅಂತವರನ್ನು ಮಾತ್ರ ನಮ್ಮ ರಾಜ್ಯದ ಒಳಗಡೆ ಬಿಡಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.1ಕ್ಕಿಂತ ಕಡಿಮೆಯೇ ಇದೆ. ಅಗತ್ಯಬಿದ್ದರೆ ಪೊಲೀಸ್ ತಪಾಸಣೆಯನ್ನೂ ತೀವ್ರಗೊಳಿಸಲಾಗುವುದು ಎಂದು ಕೃಷ್ಣಕಾಂತ ತಿಳಿಸಿದರು.
Kshetra Samachara
05/08/2021 03:07 pm