ನವಲಗುಂದ : ಶಾಸಕ ಶಂಕರಪಾಟೀಲ ಅವರಿಗೆ ಇಂದು ಬೆಳಿಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೋನಾ ಪಾಸಿಟಿವ್ ಬಂದಿದ್ದು ಸದ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮ್ಮ ಫೇಸ್ಬುಕ್ ಖಾಯೆಯ ಮುಖಾಂತರ ಜನತೆಗೆ ಅವರು ಕೊರೊನಾ ದೃಡಪಟ್ಟ ಬಗ್ಗೆ ತಿಳಿಸಿದ್ದು ಕಳೆದ ನಾಲ್ಕೈದು ದಿನಗಳಿಂದ ಅವರ ಸಂಪರ್ಕದಲ್ಲಿದ್ದ ಎಲ್ಲರಿಗೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿದ್ದಾರೆ.
ಆಸ್ಪತ್ರೆಯಲ್ಲಿ CBC, RFT, LFT, ECG, ಸಿಟಿ ಸ್ಕ್ಯಾನ್, ಡಿ ಡೈಮರ್, LDH, Serum Ferricin ಹಾಗು CRP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ ಹಾಗೂ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದು. ಕಳೆದ ಆರು ತಿಂಗಳುಗಳಿಂದ ಕೋವಿಡ್19ರ ವಿರುದ್ಧ ನಾನೂ ಸಹ ಒಬ್ಬ ಕೊರೋನಾ ವಾರಿಯರ್ ಆಗಿ ನಿರಂತರ ಜನಸೇವೆ ಮಾಡುತ್ತಿದ್ದು, ನನ್ನ ಮತ ಕ್ಷೇತ್ರದ ಬಂಧುಗಳೇ, ನಿಮ್ಮ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಮುಖಾಂತರ ನನ್ನನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದು ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ ಎಂದಿದ್ದಾರೆ.
Kshetra Samachara
30/09/2020 03:16 pm