ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 43 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 157255 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 19 ಜನರ ವರದಿ ನೆಗೆಟಿವ್ ಬಂದಿದೆ. 43 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 390 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 157255 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 155686 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20717 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19538 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 561 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 618 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 158826 ಜನರ ಮೇಲೆ ನಿಗಾ ಇಡಲಾಗಿದ್ದು, 6883 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 25965 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 125360 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
30/10/2020 09:16 pm