ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಹಾಗೂ ರೋಟರಿ ಪರಿವಾರದ ಸಹಯೋಗದೊಂದಿಗೆ ಮೇ.29 ರಂದು ಬೆಳಿಗ್ಗೆ 10ಕ್ಕೆ ಧಾರವಾಡದ ಹಳೇ ಬಸ್ ನಿಲ್ದಾಣದ ಬಳಿ ಇರುವ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಮೊಗ್ಲೋಬಿನ್, ರಕ್ತದ ಗುಂಪು, ಸಕ್ಕರೆ ಪ್ರಮಾಣ, ಥೈರಾಯ್ಡ ಕಾಯಿಲೆ, ಅಲ್ಟ್ರಾಸೊನೊಗ್ರಫಿ, ಹೃದಯದ ಪರೀಕ್ಷೆ, ಎಲುಬು ಸಾಂಧ್ರತೆ ಸೇರಿದಂತೆ ಇತ್ಯಾದಿ ಕಾಯಿಲೆಗಳ ಕುರಿತು ಪರೀಕ್ಷೆ ನಡೆಸಲಾಗುವುದು ಎಂದರು.
ಪರೀಕ್ಷೆ ನಡೆಸಿದ ನಂತರ ಯಾರಿಗೆ ಅವಶ್ಯಕತೆ ಇದೆಯೋ ಅಂತವರಿ ಉಚಿತವಾಗಿ ಚಿಕಿತ್ಸೆಯನ್ನೂ ನೀಡಲಾಗುವುದು. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು, ಚಿಕ್ಕಮಕ್ಕಳ ತಜ್ಞರು, ಫಿಜಿಸಿಯನ್, ಎಲುಬು ಮತ್ತು ಕೀಲು ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ನೇತ್ರ ಚಿಕಿತ್ಸಾ ತಜ್ಞರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಹುಬ್ಬಳ್ಳಿ, ಧಾರವಾಡ ಜನತೆ ಈ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
Kshetra Samachara
27/05/2022 03:26 pm