ನವಲಗುಂದ : ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲಾ ವಿದ್ಯಾರ್ಥಿಗಳಲ್ಲಿ ಹಾಗೂ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ.
ಹೌದು ಅಣ್ಣಿಗೇರಿ ತಾಲೂಕಿನ ತುಪ್ಪದಕುರಹಟ್ಟಿ ಗ್ರಾಮದ ಅನುದಾನಿತ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ನವಲಗುಂದ ತಾಲ್ಲೂಕಿನ ಮಣಕವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಇನ್ನು ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆ ಶಾಲೆಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದ್ದು, ಸಂಪೂರ್ಣ ಸ್ಯಾನಿಟೈಸ್ ಮಾಡಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಶಾಲೆಯ ವಿದ್ಯಾರ್ಥಿಗಳಗೆ ವಾರ್ಷಿಕ ಆರೋಗ್ಯ ತಪಾಸಣೆ ಸಂದರ್ಭದ ವೇಳೆಯಲ್ಲಿ ಮಕ್ಕಳಲ್ಲಿ ಮೂಗು ಹಾಗೂ ಕಿವಿ ಸಂಬಂಧಪಟ್ಟ ಖಾಯಿಲೆಗಳಿಂದಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋದಾಗ ಕರೋನ ಸೋಂಕು ದೃಢಪಟ್ಟಿದೆ.
Kshetra Samachara
11/01/2022 05:20 pm