ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಸಿದ್ಧವಾಯ್ತು ಆಕ್ಸಿಜನ್ ಪೂರೈಕೆ ಘಟಕ

ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 6 ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆಯ ಘಟಕಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಇದುವರೆಗೆ ಪ್ರತಿದಿನ 80 ರಿಂದ 100 ಜಂಬೋ ಆಕ್ಸಿಜನ್ ಸಿಲಿಂಡರುಗಳನ್ನು ವೈದ್ಯಕೀಯ ಚಿಕಿತ್ಸೆಗೆ ಬಳಸಲಾಗುತ್ತಿತ್ತು. ಇವುಗಳನ್ನು ಪ್ರತಿದಿನ ಪೂರೈಕೆದಾರರ ಬಳಿ ತೆಗೆದುಕೊಂಡು ಹೋಗಿ ತುಂಬಿಸಿಕೊಂಡು ಬರಬೇಕಾಗಿತ್ತು. ಈಗ 6 ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ಘಟಕ ಸ್ಥಾಪನೆಯಿಂದ ಸಮಯ, ಸಾರಿಗೆ ವೆಚ್ಚ ಉಳಿಯಲಿದೆ. ಸುರಕ್ಷತೆ ಮತ್ತು ಲಭ್ಯತೆ ದೃಷ್ಟಿಯಿಂದಲೂ ಸಾಕಷ್ಟು ಅನುಕೂಲವಾಗಲಿದೆ. ಧಾರವಾಡ ಜನತೆಗೆ, ಜಿಲ್ಲಾ ಆಸ್ಪತ್ರೆಗೆ ಇದೊಂದು ಶಾಶ್ವತ ಆಸ್ತಿಯಾಗಲಿದೆ. ಈ ಘಟಕ ಸ್ಥಾಪನೆ ಪ್ರಕ್ರಿಯೆಗೆ ಸರ್ಕಾರದ ಮಟ್ಟದಲ್ಲಿ ತ್ವರಿತ ಆರ್ಥಿಕ ಮತ್ತು ತಾಂತ್ರಿಕ ಅನುಮೋದನೆ ದೊರೆತು ಸಾಕಷ್ಟು ಸಹಕಾರ ಸಿಕ್ಕಿದೆ ಎಂದರು.

ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ ಕಿಮ್ಸ್ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ. ಇದೇ ತೆರನಾಗಿ ಧಾರವಾಡ ಜಿಲ್ಲಾಸ್ಪತ್ರೆಯೂ ಕೊರೊನಾಕ್ಕೆ ಉತ್ತಮ ಚಿಕಿತ್ಸೆ ನೀಡುತ್ತಿದೆ. ಇದುವರೆಗೆ ಇಲ್ಲಿಂದ ಸುಮಾರು 540 ಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಿಬ್ಬಂದಿ, ಮಾನವ ಸಂಪನ್ಮೂಲ, ತಜ್ಞ ವೈದ್ಯರ ಕೊರತೆಯ ನಡುವೆಯೂ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ವೈದ್ಯಾಧಿಕಾರಿಗಳು ಅಹರ್ನಿಶಿ ದುಡಿಯುತ್ತಿರುವುದು ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ತುಂಬು ಹೃದಯದಿಂದ ಶ್ಲಾಘಿಸಿದರು.

Edited By : Nagesh Gaonkar
Kshetra Samachara

Kshetra Samachara

30/09/2020 03:37 pm

Cinque Terre

32.16 K

Cinque Terre

9

ಸಂಬಂಧಿತ ಸುದ್ದಿ