ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ; ಮಹಿಳೆ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ಹೊರ ತೆಗೆದ ವೈದ್ಯರು

ಮಹಿಳೆಯೊಬ್ಬರ ಕಣ್ಣಿನ ಕೆಳಗಿನ ಭಾಗದಲ್ಲಿ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆಯುವಲ್ಲಿ ಹುಬ್ಬಳ್ಳಿ ಕಿಮ್ಸ್ ವೈದ್ಯರು ಯಶಸ್ವಿಯಾಗಿದ್ದಾರೆ.

ಹೌದು,,,, ಆಗಸ್ಟ್ 14 ರಂದು ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವಾರ (28) ಮಗಳಿಗೆ ಹಲ್ಲು ಉಜ್ಜಿಸುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಮುರಿದಿದೆ.

ಕೂಡಲೇ ಅವರು ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದುಬಂದಿದೆ. ಹಾಗೇ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು.

ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಡಾ.ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಶಸ್ತ್ರ ಚಿಕಿತ್ಸೆ ನಡೆಸಿ, 7 ಸೆಂಟಿ ಮೀಟರ್ ನಷ್ಟು ಉದ್ದದ ಮುರಿದ ಟೂತ್ ಬ್ರಶ್ ಚೂರೊಂದನ್ನು ಹೊರತೆಗೆಯಲಾಗಿದೆ. ಶಸ್ತ್ರ ಚಿಕಿತ್ಸೆ ನಂತರ ರೋಗಿ ಆರೋಗ್ಯವಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ಕಿಮ್ಸ್ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್ ವಿಜಯಪುರ ತಿಳಿಸಿದ್ದಾರೆ. ಇನ್ನು ಕಿಮ್ಸ್ ವೈದ್ಯರ ಈ ಮಹಾನ್ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ...

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/08/2022 01:09 pm

Cinque Terre

71.52 K

Cinque Terre

32

ಸಂಬಂಧಿತ ಸುದ್ದಿ