ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಕೊರೊನಾ ಹಿನ್ನೆಲೆ ದಾಸೋಹ ಮಠದ ಜಾತ್ರೆ ರದ್ದು

ಅಣ್ಣಿಗೇರಿ: ರಾಜ್ಯದಲ್ಲಿ ಕೊರೊನಾದ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳನ್ನು ಹಾಗೂ ಖಾಸಗಿ ಕಾರ್ಯಕ್ರಮಗಳಿಗೆ ಶರತ್ತುಬದ್ಧ ನಿಯಮಗಳನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ದಾಸೋಹ ಮಠದ ಜಾತ್ರೆಯನ್ನು ನಿಷೇಧ ಮಾಡಲಾಗಿರುತ್ತದೆ.

ಈ ಹಿನ್ನೆಲೆ ಕೋವಿಡ್ ಮೂರನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ನಿಯಂತ್ರಣ ಮಾಡಲು ವಿಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಜನವರಿ 8 ಮತ್ತು 9ರಂದು ಜರುಗಬೇಕಿದ್ದ ಸ್ಥಳೀಯ ದಾಸೋಹ ಮಠದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಕಾರ್ಯಕ್ರಮಗಳನ್ನು ಜಿಲ್ಲಾಡಾಳಿತದ ಆದೇಶದ ಮೇರೆಗೆ ರದ್ದುಗೊಳಿಸಲಾಗಿದೆ ಎಂದು ಮಠದ ಪೀಠಾಧಿಪತಿ ಶಿವಕುಮಾರ ಮಹಾಸ್ವಾಮಿಜಿ ಹಾಗೂ ಜಾತ್ರಾ ಸಮಿತಿ ಮತ್ತು ದಾಸೋಹ ಮಠದ ನಿರಂತರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

07/01/2022 10:37 pm

Cinque Terre

30.85 K

Cinque Terre

0

ಸಂಬಂಧಿತ ಸುದ್ದಿ