ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚಿಕಿತ್ಸೆಯಲ್ಲಿ ಮತ್ತೊಂದು ಸಾಧನೆ ಮಾಡಿದ ಕಿಮ್ಸ್ ವೈದ್ಯರು

ಪಬ್ಲಿಕ್ ನೆಕ್ಸ್ಟ್ ವರದಿ- ಈರಣ್ಣ ವಾಲಿಕಾರ

ಹುಬ್ಬಳ್ಳಿ: ಬಡರೋಗಿಗಳ ಪಾಲಿನ ಸಂಜೀವಿನಿ ಎಂದೇ ಹೆಸರಾದ ಕಿಮ್ಸ್ ಆಸ್ಪತ್ರೆ ಇದೀಗ ಮೊದಲ ಬಾರಿಗೆ ತೆರೆದ ಹೃದಯದ ಶಸ್ತ್ರ ಚಿಕಿತ್ಸೆ ಮಾಡಿ ಇಬ್ಬರ ಜೀವ ಉಳಿಸಿದೆ. ಯಶಸ್ವಿಯಾಗಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿರುವ ಕಿಮ್ಸ್ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎನ್ನುವುದನ್ನು ಸಾಬೀತು ಮಾಡಿದೆ.

ಹೌದು,,, ಹುಬ್ಬಳ್ಳಿ 31 ವರ್ಷ ವಯಸ್ಸಿನ ನಾಗೇಶ ಮಾದರ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತೀವ್ರ ಉಸಿರಾಟ ಸಮಸ್ಯೆ ಎದುರಿಸುತ್ತಿದ್ದನು. ಇವರು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿ, ಇಸಿಜಿ ಮಾಡಿದಾಗ ಹೃದಯದಲ್ಲಿ ದೊಡ್ಡ ರಂಧ್ರ ಇರುವುದು ಪತ್ತೆಯಾಯಿತು. ಇವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಕೇವಲ ಕೆಲವು ದಿನಗಳಲ್ಲೇ ಚೇತರಿಸಿಕೊಂಡಿದ್ದಾರೆ.

ಇದಲ್ಲದೇ 68 ವರ್ಷದ ಗಂಗಮ್ಮ ಶಿರೋಳ ಎಂಬುವವರು ಎದೆ ನೋವು ಕಾಣಿಸಿಕೊಂಡು ಇವರಿಗೆ ಲಘು ಹೃದಯಾಘಾತ ಸಂಭವಿಸಿತ್ತು. ಇವರಿಗೆ ಕೂಡಲೇ ಚಿಕಿತ್ಸೆ ಅನಿವಾರ್ಯ ಕಾರಣದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹೋಗುವಂತೆ ಸೂಚನೆ ನೀಡಲಾಗಿತ್ತು. ಆದರೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಕಿಮ್ಸ್ ಆಸ್ಪತ್ರೆ ವೈದ್ಯರು ವಾಪಾಸ್ ಗಂಗಮ್ಮ ಶಿರೋಳ ಅವರನ್ನು ಕರೆಸಿಕೊಂಡು ಜಯದೇವ ಆಸ್ಪತ್ರೆಯ ಸಹಕಾರದೊಂದಿಗೆ ಡಾ.ಉಲ್ಲಾಸ್ ಬಿಸ್ಲೇರಿ ಮತ್ತು ತಂಡದಿಂದ ಬೈಪಾಸ್ ಹಾರ್ಟ್ ಸರ್ಜರಿ ಮಾಡುವ ಮೂಲಕ ರೋಗಿಗೆ ಮರು ಜೀವ ನೀಡಿದ್ದಾರೆ.

ಕಿಮ್ಸ್ ಹಾರ್ಟ್ ಸೆಂಟರ್ ಮೇಲ್ವಿಚಾರಕ ಡಾ. ಹೊಸಮನಿ ಹಾಗೂ ಮತ್ತವರ ತಂಡ ತೆರೆದ ಹೃದಯ ಚಿಕಿತ್ಸೆಯನ್ನು ಮಾಡಿದ್ದಾರೆ. ಇನ್ಮುಂದೆ ಯಾವುದೇ ರೋಗಕ್ಕೂ ಕೂಡ ಖಾಸಗಿ ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ. ಕಿಮ್ಸ್‌ನಲ್ಲಿ ಇದೀಗ ಎಲ್ಲ ಸೌಲಭ್ಯಗಳು ದೊರೆಯುತ್ತಿವೆ.

Edited By : Somashekar
Kshetra Samachara

Kshetra Samachara

27/05/2022 06:20 pm

Cinque Terre

24.69 K

Cinque Terre

16

ಸಂಬಂಧಿತ ಸುದ್ದಿ