ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 12 ಪಾಸಿಟಿವ್, 173 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 904 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 231975 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 173 ಜನರ ವರದಿ ನೆಗೆಟಿವ್ ಬಂದಿದೆ. 12 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 186 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 231975 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 231068 ಜನರ ವರದಿ ನೆಗೆಟಿವ್ ಎಂದು ಬಂದಿದೆ.

21830 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21109 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

607 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 117 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 234243 ಜನರ ಮೇಲೆ ನಿಗಾ ಇಡಲಾಗಿದ್ದು, 14710 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

16535 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 202881 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/12/2020 07:06 pm

Cinque Terre

27.4 K

Cinque Terre

0

ಸಂಬಂಧಿತ ಸುದ್ದಿ