ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 10 ಪಾಸಿಟಿವ್, 50 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 249 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 232224 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 50 ಜನರ ವರದಿ ನೆಗೆಟಿವ್ ಬಂದಿದೆ. 10 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 136 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 232224 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 231384 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21840 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21136 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 607 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 100 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 234492 ಜನರ ಮೇಲೆ ನಿಗಾ ಇಡಲಾಗಿದ್ದು, 13376 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 16366 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 204650 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

29/12/2020 09:44 pm

Cinque Terre

49.33 K

Cinque Terre

2

ಸಂಬಂಧಿತ ಸುದ್ದಿ