ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 230 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 2,32,454 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 63 ಜನರ ವರದಿ ನೆಗೆಟಿವ್ ಬಂದಿದೆ. 19 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 199 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 2,32,454 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 2,31,540 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21,859 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21,144 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 608 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 110 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 2,34,722 ಜನರ ಮೇಲೆ ನಿಗಾ ಇಡಲಾಗಿದ್ದು, 11,891 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 17,194 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 2,05,527 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
30/12/2020 10:06 pm