ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 6871 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 268245 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 108 ಜನರ ವರದಿ ನೆಗೆಟಿವ್ ಬಂದಿದೆ. 11 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 208 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 268245 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 267342 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21882 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21187 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 609 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 89 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 270513 ಜನರ ಮೇಲೆ ನಿಗಾ ಇಡಲಾಗಿದ್ದು, 18683 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 31073 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 220668 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
02/01/2021 10:28 pm