ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 16 ಪಾಸಿಟಿವ್, 102 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 261 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 310433 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 102 ಜನರ ವರದಿ ನೆಗೆಟಿವ್ ಬಂದಿದೆ. 16 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 302 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 310433 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 309430 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21217 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 609 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 95 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 312714 ಜನರ ಮೇಲೆ ನಿಗಾ ಇಡಲಾಗಿದ್ದು, 20905 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 32046 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 259668 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

05/01/2021 10:56 pm

Cinque Terre

43.06 K

Cinque Terre

0

ಸಂಬಂಧಿತ ಸುದ್ದಿ