ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 14 ಪಾಸಿಟಿವ್, 81 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 646 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 320079 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 81 ಜನರ ವರದಿ ನೆಗೆಟಿವ್ ಬಂದಿದೆ. 14 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 221 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 320079 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 319155 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21932 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21229 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 610 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 96 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 323146 ಜನರ ಮೇಲೆ ನಿಗಾ ಇಡಲಾಗಿದ್ದು, 22780 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 33611 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 266659 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

06/01/2021 09:42 pm

Cinque Terre

18.15 K

Cinque Terre

0

ಸಂಬಂಧಿತ ಸುದ್ದಿ