ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 875 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 332954 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 228 ಜನರ ವರದಿ ನೆಗೆಟಿವ್ ಬಂದಿದೆ. 16 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 449 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 332954 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 331799 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21948 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21242 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 610 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 99 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 336061 ಜನರ ಮೇಲೆ ನಿಗಾ ಇಡಲಾಗಿದ್ದು, 25336 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 34358 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 276268 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
07/01/2021 11:09 pm