ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 13 ಪಾಸಿಟಿವ್, 431 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 922 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 363736 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 431 ಜನರ ವರದಿ ನೆಗೆಟಿವ್ ಬಂದಿದೆ. 13 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 363 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 363736 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 362656 ಜನರ ವರದಿ ನೆಗೆಟಿವ್ ಎಂದು ಬಂದಿದೆ. 22012 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 22012 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 610 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 110 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 366858 ಜನರ ಮೇಲೆ ನಿಗಾ ಇಡಲಾಗಿದ್ದು, 40015 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 39565 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 287168 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

12/01/2021 10:30 pm

Cinque Terre

14.8 K

Cinque Terre

1

ಸಂಬಂಧಿತ ಸುದ್ದಿ