ಕುಂದಗೋಳ : ಪಟ್ಟಣದ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ಕೋವಿಡ್-19 ವ್ಯಾಕ್ಸಿನ್'ಗೆ ಶಾಸಕಿ ಕುಸುಮಾವತಿ ಶಿವಳ್ಳಿ ನೇತೃತ್ವದಲ್ಲಿ ಗಣೇಶನ ಪೂಜಾ ಸ್ಮೃತಿ ಹೇಳಿ ಚಪ್ಪಾಳೆ ತಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.
ತಹಶೀಲ್ದಾರ ಬಸವರಾಜ ಮೆಳವಂಕಿ ಹಾಗೂ ಹಿರಿಯ ವೈದ್ಯಾಧಿಕಾರಿ ಭಾಗಿರಥೀಯವರ ಸಹಯೋಗದಲ್ಲಿ ಕೋವಿಡ್ ವ್ಯಾಕ್ಸಿನ್ ಕೊಠಡಿಯ ರಿಬ್ಬನ್ ಕತ್ತರಿಸುವ ಮೂಲಕ ಶಾಸಕಿ ಕುಸುಮಾವತಿ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮೊದಲ ಹಂತದ ವ್ಯಾಕ್ಸಿನ್ ನೀಡಲು ಚಾಲನೆ ನೀಡಿದರು.
ಕೋವಿಡ್ ವ್ಯಾಕ್ಸಿನ್ ಕೊಠಡಿಯನ್ನು ಪರಿಶೀಲನೆ ನಡೆಸಿದ ಶಾಸಕಿ ಕುಸುಮಾವತಿ ತಹಶೀಲ್ದಾರ ಬಸವರಾಜ ಮೆಳವಂಕಿ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು ಕೊರೊನಾ ವೈರಸ್ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೀರಿ ನಿಮಗೆ ಮೊದಲು ವ್ಯಾಕ್ಸಿನ್ ದೊರಕಿರುವುದು ಸಂತಸದ ವಿಷಯ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರು, ಪಟ್ಟಣ ಪಂಚಾಯಿತಿ ಸದಸ್ಯರು, ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
16/01/2021 01:54 pm