ನವಲಗುಂದ : ಇದೆ ತಿಂಗಳ 16 ರಂದು ರಾಜ್ಯಾದ್ಯಂತ ಕೋವಿಡ್ ವ್ಯಾಕ್ಸಿನ್ ಅನ್ನು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ನೀಡಲು ಆರಂಭಿಸಲಾಗಿತ್ತು, ಇಂದು ನವಲಗುಂದ ತಾಲೂಕಿನಲ್ಲಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಹ ವ್ಯಾಕ್ಸಿನ್ ನೀಡಲಾಯಿತು.
ತಾಲೂಕಿನ ಅಳಗವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಶಾ ಕಾರ್ಯಕರ್ತೆಯರು, ಗ್ರಾಮಸ್ತರು ಸೇರಿದಂತೆ ಸುಮಾರು 70 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಯಿತು. ಈ ವೇಳೆ ಆಸ್ಪತ್ರೆಯ ಮುಂದೆ ರಂಗೋಲಿ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು.
Kshetra Samachara
18/01/2021 08:27 pm