ಹುಬ್ಬಳ್ಳಿ: ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಚುರುಕಾಗಿ ನಡೆದಿದ್ದು,ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿಯಲ್ಲಿಯೂ ಕೂಡ ಕೊವೀಡ್ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು.
ಈಗಾಗಲೇ ದೇಶಾದ್ಯಂತ ಎಲ್ಲೆಡೆಯೂ ಕೋವಿಡ್ ವ್ಯಾಕ್ಸಿನ್ ಲಸಿಕೆ ವಿತರಣೆ ಮಾಡುತ್ತಿದ್ದು,ರೈಲ್ವೆ ಸಚಿವಾಲಯ ಕೂಡ ಲಸಿಕೆ ವಿತರಣೆಗೆ ಮುಂದಾಗಿದೆ.ಇನ್ನೂ ಹುಬ್ಬಳ್ಳಿಯ ರೈಲ್ವೆ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಸಿಬ್ಬಂದಿಗಳಿಗೆ ಕೋವಿಡ್ ವ್ಯಾಕ್ಸಿನ್ ಲಸಿಕೆ ನೀಡಲಾಯಿತು.
Kshetra Samachara
18/01/2021 08:32 pm