ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ ವ್ಯಾಕ್ಸಿನ್ ನೀಡಿಕೆ ಪರಿಶೀಲನೆ

ಅಣ್ಣಿಗೇರಿ : ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯಾವುದೇ ಮುನ್ಸೂಚನೆ ನೀಡದೆ ದಿಡೀರ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕೋವಿಡ್ ವಾರಿಯರ್ಸ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುತ್ತಿರುವ ಕೋವಿಡ್ ವ್ಯಾಕ್ಸಿನ್ ಕುರಿತು ಮಾಹಿತಿ ಪಡೆದರು.

ಬಳಿಕ ವೈದ್ಯಕೀಯ ಸಿಬ್ಬಂದಿಗಳ ಜೊತೆ ಮಾತನಾಡಿದ ಅವರು ಈಗಾಗಲೇ ಕೋವಿಡ್ ವಾರಿಯರ್ಸ್ಗೆ ಎಲ್ಲೆಡೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಮುಂದಾಗಿದ್ದು, ಮುಂದೆ ಸಾಮಾನ್ಯ ಜನರಿಗೆ ಲಭ್ಯವಾಗುತ್ತದೆ ಅದರಲ್ಲೂ ಬಿಪಿ ಶುಗರ್ ಇದ್ದವರಿಗೆ ಆಧ್ಯತೆ ನೀಡಲಾಗುವುದು ಎಂದರು.

ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲು ಪಟ್ಟಣಕ್ಕೆ ಆಗಮಿಸಿದ ಅವರು ಆ ಕಾರ್ಯಕ್ರಮದ ನಂತರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

18/01/2021 10:06 pm

Cinque Terre

22.51 K

Cinque Terre

0

ಸಂಬಂಧಿತ ಸುದ್ದಿ