ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 8 ಪಾಸಿಟಿವ್, 188 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 308 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 379591 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 188 ಜನರ ವರದಿ ನೆಗೆಟಿವ್ ಬಂದಿದೆ. 8 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 280 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 379591 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 378608 ಜನರ ವರದಿ ನೆಗೆಟಿವ್ ಎಂದು ಬಂದಿದೆ. 22079 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21376 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 610 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 96 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 382748 ಜನರ ಮೇಲೆ ನಿಗಾ ಇಡಲಾಗಿದ್ದು, 21485 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 55801 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 305366 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

19/01/2021 10:39 pm

Cinque Terre

31.79 K

Cinque Terre

0

ಸಂಬಂಧಿತ ಸುದ್ದಿ