ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 732 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 386537 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 293 ಜನರ ವರದಿ ನೆಗೆಟಿವ್ ಬಂದಿದೆ. 2 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 445 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 386537 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 385425 ಜನರ ವರದಿ ನೆಗೆಟಿವ್ ಎಂದು ಬಂದಿದೆ. 22097 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21430 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 611 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 59 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 389704 ಜನರ ಮೇಲೆ ನಿಗಾ ಇಡಲಾಗಿದ್ದು, 19864 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 55548 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 314233 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
22/01/2021 09:50 pm