ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 15 ಪಾಸಿಟಿವ್, 169 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 740 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 3,87,277 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 169 ಜನರ ವರದಿ ನೆಗೆಟಿವ್ ಬಂದಿದೆ. 15 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 276 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 3,87,277 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 3,86,329 ಜನರ ವರದಿ ನೆಗೆಟಿವ್ ಎಂದು ಬಂದಿದೆ. 22,112 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21,440 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 611 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 64 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 3,90,444 ಜನರ ಮೇಲೆ ನಿಗಾ ಇಡಲಾಗಿದ್ದು, 19,548 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 54,585 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 3,16,247 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

23/01/2021 10:36 pm

Cinque Terre

34.68 K

Cinque Terre

0

ಸಂಬಂಧಿತ ಸುದ್ದಿ