ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 603 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 398386 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 331 ಜನರ ವರದಿ ನೆಗೆಟಿವ್ ಬಂದಿದೆ. 13 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 353 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 398386 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 397359 ಜನರ ವರದಿ ನೆಗೆಟಿವ್ ಎಂದು ಬಂದಿದೆ. 22162 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21488 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 612 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 65 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 401562 ಜನರ ಮೇಲೆ ನಿಗಾ ಇಡಲಾಗಿದ್ದು, 13177 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 42292 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 346028 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
29/01/2021 09:58 pm