ಕಲಘಟಗಿ: ಪಟ್ಟಣದ ಮಾಚಾಪೂರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪಟ್ಟಣ ಪಂಚಾಯತಿ ಅಧ್ಯಕ್ಷೆ ಅನಸೂಯಾ ಹೆಬ್ಬಳ್ಳಿಮಠ ದೀಪ ಬೆಳಗಿಸಿ ಅಭಿಯಾನವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ಅಧಿಕಾರಿ ಡಾ ಬಸವರಾಜ ಬಾಸೂರ,ವೈದ್ಯಾಧಿಕಾರಿ ಡಾ.ಸತ್ಯನಾರಾಯಣ.ಎಮ್ ,ತಾಲೂಕಾ ಎಲ್.ಎಚ್.ವಿ ಕೆ.ಎಮ್.ಗಿರಿಜಾದೇವಿ,ತಾಲೂಕಾ ಆಶಾ ಮೇಲ್ವಿಚಾರಕಿ ಶೋಭಾ ಸೊಂಟಿ,ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕ ಹೇಮರಡ್ಡಿ ಸೋಮಣ್ಣವರ,ಜಿಲ್ಲಾ ಲಸಿಕಾ ಮೇಲ್ವಿಚಾರಕಿ ವೀಣಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
31/01/2021 12:14 pm