ಕುಂದಗೋಳ : ತಾಲೂಕಿನ ಯಲಿವಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಪರಿಶೀಲನೆ ನಡೆಸಿದರು.
ಬಳಿಕ ಆಸ್ಪತ್ರೆಯಲ್ಲಿ ನಡೆದಿರುವ ಕೋವಿಡ್-19 ತಪಾಸಣೆ ಬಗೆಗೆ ಜನರಿಗೆ ಅರಿವು ಮೂಡಿಸಿ ಸ್ವತಃ ಸ್ವಾಬ್ ಕಲೆಕ್ಷನ್ ಮಾಡುವ ಮೂಲಕ ಜನರಿಗೆ ಭಯ ಪಡಬೇಡಿ ಕೋವಿಡ್ ಭಯ ದೂರವಾಗಿ ವ್ಯಾಕ್ಸಿನ್ ಒದಗಿದೆ ಎಂದರು.
ಈ ವೇಳೆ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಮಾತೆತ್ತಿದ ಯಲಿವಾಳ ಗ್ರಾಮಸ್ಥರು ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯ ನೀಡಿ ಇಲ್ಲಿನ ಸಮಸ್ಯೆ ನಿವಾರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನ ಕೇಳಿದಾಗ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಬಳಿಕ ಗುಡಗೇರಿ, ಯರಗುಪ್ಪಿ, ಸಂಶಿ ಸೇರಿದಂತೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಆಲಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅರಿವನ್ನು ಜನರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕುಂದಗೋಳ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಭಾಗಿರಥೀ ಮಡ್ಲೇರಿ ಉಪಸ್ಥಿತರಿದ್ದು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಿತಿ ಗತಿ ವಿವರಿಸಿದರು.
Kshetra Samachara
02/02/2021 04:18 pm