ಹುಬ್ಬಳ್ಳಿ: ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆ ನಗರದಲ್ಲಿಂದು ಕ್ಯಾನ್ಸರ್ ಜಾಗೃತಿಗಾಗಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಹಾಗೂ ಸಂಶೋಧನೆ ಸಂಸ್ಥೆಯ ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಕ್ಯಾನ್ಸರ್ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಜಾಥಾ ಆಯೋಜನೆ ಮಾಡಿದ್ದು,ಜಾಥಾಕ್ಕೆ ಸಂಸ್ಥೆಯ ಚೇರ್ಮನ್ ಡಾ. ಬಿ.ಆರ್. ಪಾಟೀಲ ಚಾಲನೆ ನೀಡಿದರು.
ನಗರದ ಲ್ಯಾಮಿಂಗ್ಟನ್ ಶಾಲಾ ಆವರಣದಿಂದ ಆರಂಭವಾದ ಜಾಥಾ ಕಿತ್ತೂರು ಚನ್ನಮ್ಮ ವೃತ್ತಕ್ಕೆ ಬಂದು ಅಂತ್ಯಗೊಂಡಿತು.ಕ್ಯಾನ್ಸರ್ ಮುಂಜಾಗ್ರತೆ ಕ್ರಮಗಳ ಬಗ್ಗೆ ಪರಿಣಿತರು ಮತ್ತು ತಜ್ಞ ವೈದ್ಯರಿಂದ ಕಿರು ನಾಟಕ ಪ್ರದರ್ಶನ ಮಾಡಿದರು.
Kshetra Samachara
04/02/2021 12:31 pm