ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವಳಿನಗರದಲ್ಲಿ ಏಮ್ಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಒಲವು: ಸಾರ್ವಜನಿಕರಲ್ಲಿ ಹೆಚ್ಚಿದ ಸಂತಸ...!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ಉತ್ತರ ಕರ್ನಾಟಕದ ಹೆಬ್ಬಾಗಿಲು. ಈ ಹೆಬ್ಬಾಗಿಲು ಈಗ ಮತ್ತೊಂದು ಗೌರವದ ಗರಿಯನ್ನು ಮುಡಿಗೇರಿಸಿಕೊಳ್ಳುತ್ತಿದೆ.ಈಗ ಸಿಗುತ್ತಿದ್ದ ಸೌಲಭ್ಯ ಮತ್ತಷ್ಟು ಉತ್ಕೃಷ್ಟ ಮಟ್ಟದಲ್ಲಿ ಉತ್ತರ ಕರ್ನಾಟಕದ ಜನರಿಗೆ ದೊರೆಯಲಿದೆ. ಹಾಗಿದ್ದರೇ ಯಾವುದು ಆ ಗರಿ..?ಅಂತೀರಾ ಈ ಸ್ಟೋರಿ ನೋಡಿ...

ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಪ್ರತಿಷ್ಠಿತ ಆಲ್ ಇಂಡಿಯಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ಗೆ ಈಗ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಳ ಗುರುತಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಹೌದು..ದೇಶದಲ್ಲಿಯೇ ಪ್ರತಿಷ್ಠಿತ ವೈದ್ಯಕೀಯ ಕಾಲೇಜೊಂದು ಅವಳಿನಗರಕ್ಕೆ ಸ್ಥಳಾಂತರವಾಗುವ ಸಾಧ್ಯತೆ ಸ್ಪಷ್ಟವಾಗಿದ್ದು,ಈ ಭಾಗದ ಜನರಲ್ಲಿ ಸಂತಸಕ್ಕೆ ಕಾರಣವಾಗಿದೆ.ಇಷ್ಟುದಿನ ಕಿಮ್ಸ್ ಸೇವೆಯನ್ನು ಪಡೆಯುತ್ತಿದ್ದ ಜನರು ಈಗ ಏಮ್ಸ್ ಸೇವೆಯಿಂದ ಮತ್ತಷ್ಟು ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಲಿದ್ದಾರೆ..

1400 ಕೋಟಿ ರೂಪಾಯಿ ಅಂದಾಜು ವೆಚ್ಚದೊಂದಿಗೆ ವಿಶಾಲ ಪ್ರದೇಶದಲ್ಲಿ ಬೃಹದಾಕಾರವಾಗಿ ನಿರ್ಮಾಣಗೊಂಡಿರುವ ಸೇಡಂ ರಸ್ತೆಯ ಸುಸಜ್ಜಿತ ಇಎಸ್ಐಸಿ ಆಸ್ಪತ್ರೆಯನ್ನು ಆಲ್ ಇಂಡಿಯಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಗಿ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸಕ್ತಿ ತೋರಿದ್ದರು ಆದರೀಗ ಹು-ಧಾ ಮಹಾನಗರದಲ್ಲಿ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದ್ದು,ಹು-ಧಾ ದಲ್ಲಿ ಏಮ್ಸ್ ಗೆ ಜಮೀನು ಗುರುತಿಸುವ ಕುರಿತಂತೆ ಲೋಕಸಭೆಯಲ್ಲಿ ಲಿಖಿತ ಉತ್ತರವನ್ನು ನೀಡಿದೆ ಎಂದು ಹೇಳಲಾಗಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಮೂರು ಸ್ಥಳಗಳ ಪರಿಶೀಲನೆ ನಡೆಸಲಾಗುತ್ತಿದ್ದು,ಒಂದನ್ನು ಅಂತಿಮಗೊಳಿಸಲಾಗುತ್ತಿದೆ.ಹುಬ್ಬಳ್ಳಿ-ಧಾರವಾಡದಲ್ಲಿ ಬರುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ. ಅಲ್ಲದೇ ನಮ್ಮ ಕರ್ನಾಟಕಕ್ಕೆ ಏಮ್ಸ್ ಬರುತ್ತಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ...

ಕೇಂದ್ರ ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ಸಚಿವರಾಗಿದ್ದ ರಾಜ್ಯ ಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯ ಇಎಸ್ಐಸಿಯನ್ನು ಏಮ್ಸ್ ಆಗಿ ಮೇಲ್ದರ್ಜೆಗೆ ಏರಿಸುವ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆಯನ್ನು ಮಂಡಿಸಿದ್ದರು.ಏಮ್ಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಹು-ಧಾ ಮಹಾನಗರದ ಬಗ್ಗೆ ಒಲವು ತೋರಿಸಿರುವುದು ಹು-ಧಾ ಅವಳಿನಗರದ ಸೌಭಾಗ್ಯವಾಗಿದೆ..

Edited By : Manjunath H D
Kshetra Samachara

Kshetra Samachara

13/02/2021 05:26 pm

Cinque Terre

41.24 K

Cinque Terre

12

ಸಂಬಂಧಿತ ಸುದ್ದಿ