ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಿವಿಲ್ ಆಸ್ಪತ್ರೆಯ ವಿವಿಧ ವಾರ್ಡ್ ಗಳಿಗೆ ಹಠಾತ್ ಭೇಟಿ ನೀಡಿದ ಡಿಸಿ

ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೋವಿಶೀಲ್ಡ್ ಲಸಿಕೆ ಪಡೆದ ನಂತರ ಜಿಲ್ಲಾ ಆಸ್ಪತ್ರೆಯ ವಿವಿಧ ಘಟಕ ಹಾಗೂ ವಾರ್ಡ್ ಗಳಿಗೆ ಭೇಟಿ ನೀಡಿ, ಚಿಕಿತ್ಸೆ ಹಾಗೂ ಸೌಲಭ್ಯಗಳ ಕುರಿತು ರೋಗಿಗಳ ಹಾಗೂ ಪಾಲಕರ ಅಭಿಪ್ರಾಯ ಪಡೆದರು.

ಪೌಷ್ಟಿಕ ಆಹಾರ ಕೊರತೆಯಿಂದ ಬಳಲುವ ಮಕ್ಕಳಿಗೆ ಚಿಕಿತ್ಸೆ, ಪೌಷ್ಟಿಕಾಂಶ ನೀಡಲು ಆರಂಭಸಿರುವ ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರಕ್ಕೂ ಭೇಟಿ ನೀಡಿದ ಡಿಸಿ, ಅಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಪಾಲಕರಿಗೆ ನೀಡುವ ಆಹಾರ, ಔಷಧಗಳ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಪೌಷ್ಟಿಕಾಂಶದ ಕೊರತೆ ಇರುವ ಮಕ್ಕಳನ್ನು ಗುರುತಿಸಿ, ಅಂಗನವಾಡಿ ಕೇಂದ್ರಗಳಿಂದ ಶಿಫಾರಸ್ಸು ಮಾಡಬೇಕು. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತೃಪ್ತಿಕರವಾಗಿ ಕೆಲಸ ಮಾಡುತ್ತಿಲ್ಲ. ಏಕಕಾಲಕ್ಕೆ ಹತ್ತು ಮಕ್ಕಳಿಗೆ ಆರೈಕೆ ಮಾಡಲು ಜಿಲ್ಲಾಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬಡವರಿಗೆ, ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಈ ಸೌಲಭ್ಯ ತಲುಪಿಸುವಲ್ಲಿ ಇಲಾಖೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

21/02/2021 04:14 pm

Cinque Terre

31.23 K

Cinque Terre

3

ಸಂಬಂಧಿತ ಸುದ್ದಿ