ಕುಂದಗೋಳ : ಪಟ್ಟಣದ ಸರ್ಕಾರಿ ಆಸ್ಪತ್ರೆ ವತಿಯಿಂದ ಆರೋಗ್ಯ ಶಿಕ್ಷಣಾಧಿಕಾರಿ ರೂಪಾ ತುರಮರಿ ಅವರ ನೇತೃತ್ವದಲ್ಲಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್-19 ಕುರಿತಂತೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಕುರಿತು ತಿಳುವಳಿಕೆ ನೀಡಿದರು. ಕುಷ್ಟರೋಗದ ಕುರಿತಂತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ರೂಪಾ ತುರಮರಿ ರಸ ಪ್ರಶ್ನೆ ಕಾರ್ಯಕ್ರಮ ನಿರೂಪಿಸಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಹಣವನ್ನು ಬಹುಮಾನವಾಗಿ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಶಿಕ್ಷಕ ಬಳಗ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
25/02/2021 07:47 pm