ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಯಾರು ಭಯಪಡದೇ ವ್ಯಾಕ್ಸಿನ್ ತೆಗೆದುಕೊಳ್ಳಬೇಕು: ಸಚಿವ ಶೆಟ್ಟರ್ ಸಲಹೆ...!

ಹುಬ್ಬಳ್ಳಿ: ಯಾರು ಭಯ ಪಡಬೇಡಿ.ಸ್ವಯಂ ಪ್ರೇರಿತರಾಗಿ ಎಲ್ಲರೂ ವ್ಯಾಕ್ಸಿನ್ ತೆಗೆದುಕೊಳ್ಳಬೇಕು.ನಾವು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡ್ತಿದ್ದೇವೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ವ್ಯಾಕ್ಸಿನ್ ತೆಗೆದುಕೊಂಡ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ‌ಸಚಿವ ಜಗದೀಶ್ ಶೆಟ್ಟರ್,ಈಗಾಗಲೇ ಕೊರೋನಾ ಅಲೆ ಕಡಿಮೆಯಾಗಿದ್ದು,ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಹಲವಾರು ಜನಪರ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಗೆಲುವು ಸಾಧಿಸಿದ್ದು,ಈಗ ಸರ್ಕಾರ ಕೋವಿಶಿಲ್ಡ್ ವ್ಯಾಕ್ಸಿನ್ ಬಿಡುಗಡೆಗೊಳಿಸಿದೆ ಇಂದು ನಾನು ಕೂಡ ಕೋವಿಶಿಲ್ಡ್ ಪಡೆದುಕೊಂಡಿದ್ದೇನೆ ಎಲ್ಲರೂ ಈ ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಕೋವಿಡ್ ಓಡಿಸಲು ಎಲ್ಲರೂ ವ್ಯಾಕ್ಸಿನ್ ತೆಗೆದುಕೊಳ್ಳಬೇಕು.ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೆಯ ಅಲೆ ಆರಂಭವಾಗಿದೆ.ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿಯೂ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದ ಅವರು,ನಮ್ಮ ಆರೋಗ್ಯದ ಬಗ್ಗೆ ನಾವು ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.

Edited By : Manjunath H D
Kshetra Samachara

Kshetra Samachara

01/03/2021 02:22 pm

Cinque Terre

25.45 K

Cinque Terre

1

ಸಂಬಂಧಿತ ಸುದ್ದಿ