ಧಾರವಾಡ: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಹೋಟೆಲ್‌ಗಳಲ್ಲಿ ತಂಗುವ ಕೇರಳ ಹಾಗೂ ಮಹಾರಾಷ್ಟ್ರ ನಿವಾಸಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‌ಟಿಪಿಸಿಆರ್ ವರದಿ ತರಬೇಕು. ಟಿಕೆಟ್ ಕೊಡುವ ಮುಂಚೆಯೇ ವರದಿ ಪಡೆಯಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಮೂರನೇ ಅಲೆ ತಡೆಗಟ್ಟುವಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಮಹಾರಾಷ್ಟ್ರದಿಂದ ಬಂದ ಐದು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸದ್ಯ ಅವರು ಹೋಮ್ ಐಸೊಲೇಷ್‌ದಲ್ಲಿ ಇದ್ದಾರೆ. ಹೀಗಾಗಿ ಹೊರ ರಾಜ್ಯದಿಂದ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯ ಎಂದು ಮಾಹಿತಿ ನೀಡಿದರು.
Kshetra Samachara
03/08/2021 10:03 pm