ಧಾರವಾಡ: ಧಾರವಾಡದ ಹೆಬ್ಬಾಳ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಾಜಿ ಪ್ರಾಚಾರ್ಯ ದಿವಂಗತ ಪ್ರಕಾಶ ಹೆಬ್ಬಾಳ ಅವರ ಪುಣ್ಯಸ್ಮರಣೆ ಅಂಗವಾಗಿ ಕಾಲೇಜಿನಲ್ಲಿ ಗುರುವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಧಾರವಾಡದ ಜಿಲ್ಲಾ ಆಸ್ಪತ್ರೆ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಈ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಅನೇಕ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿದರು.
ದಿವಂಗತ ಪ್ರಕಾಶ ಅವರು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಹೀಗಾಗಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಿ ಸಾಮಾಜಿಕವಾಗಿ ಸೇವೆ ಮಾಡಲಾಗುತ್ತಿದೆ ಎಂದು ಕಾಲೇಜಿನ ಪ್ರಾಚಾರ್ಯ ರಮೇಶ ತಿಳಿಸಿದರು.
Kshetra Samachara
05/08/2021 04:28 pm