ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮೂರನೇ ಅಲೆ ಬಂದಿಲ್ಲ. ಸದ್ಯ 8 -10 ಕೋವಿಡ್ ಕೇಸ್ ಮಾತ್ರ ಬರುತ್ತಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಾಗುತ್ತಾ ಇವೆ. ಆದರೆ ಮುಂದಿನ ದಿನಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರದ ಆದೇಶದಂತೆ ರಾತ್ರಿ ಕರ್ಫ್ಯೂ ಜಾರಿ ಮಾಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎಲ್ಲ ಆಸ್ಪತ್ರೆಗಳಲ್ಲಿಯೂ ಮೂರನೇ ಅಲೆ ಎದುರಿಸಲು ಪೂರ್ವಸಿದ್ಧತೆ ನಡೆಸಲಾಗಿದೆ. ಕಿಮ್ಸ್ ನಲ್ಲಿ ಮೂರು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬಂದಿವೆ. ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ತರಲಾಗಿದೆ. ಕಿಮ್ಸ್, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನೂ ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಮಕ್ಕಳಿಗಾಗಿಯೂ 500 ಬೆಡ್ ಗಳ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಧಾರವಾಡ ಡಿಸಿ ನಿತೇಶ್ ಪಾಟೀಲ ಹೇಳಿದರು.
Kshetra Samachara
07/08/2021 12:17 pm